Monday, June 30, 2025
spot_imgspot_img
spot_imgspot_img

ವಿಟ್ಲ: (ಜು 8) ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

- Advertisement -
- Advertisement -

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದಲ್ಲಿ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಜು. 08ರಂದು ಬೆಳಿಗ್ಗೆ 9.30ಯಿಂದ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಶೋಕ್‌ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರಿನ ಅರ್ಥಶಾಸ್ತ್ರ ವಿಭಾಗ, ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಪ್ರೊ. ಶಾಂತರಾಮ ಎ. ಭಾಗವಹಿಸಲಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ನಿವೃತ್ತ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ಪ್ರೊ. ಚಕ್ರೇಶ್ವರಿ ಎ.ಬಿ. ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಇವರುಗಳು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

- Advertisement -

Related news

error: Content is protected !!