Sunday, June 29, 2025
spot_imgspot_img
spot_imgspot_img

ಸಿಎಂ ಮತ್ತು ಡಿಸಿಎಂ ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು

- Advertisement -
- Advertisement -

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ಇದೇ ವೇಳೆ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಹಂತ ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.ಈ
ವೇಳೆ ಮಾತನಾಡಿದ ಸಿದ್ದರಾಮಯ್ಯ, ​ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಅಂತ್ಯೋದಯ, BPL ಕಾರ್ಡ್​ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು ಎಂದರು.

- Advertisement -

Related news

error: Content is protected !!