Saturday, June 6, 2026
spot_imgspot_img
spot_imgspot_img

ಪುಂಜಾಲಕಟ್ಟೆ: ಸ್ವರ್ಣ ಕುಸುರಿ ಕೆಲಸಗಾರ ಸೈನೇಡ್ ಸೇವಿಸಿ ಆತ್ಮಹತ್ಯೆಗೆ ಶರಣು..!!

- Advertisement -
- Advertisement -

ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಪುಂಜಾಲಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು.

ರೂಪೇಶ್ ಅವರು ಸ್ವರ್ಣ ಕುಸುರಿ ಕೆಲಸಗಾರರಾಗಿದ್ದು, ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದರು. ಇತ್ತೀಚೆಗೆ ಕೆಲಸ ಬಿಟ್ಟಿದ್ದ ಅವರು ಮದ್ಯವ್ಯಸನಿಯಾಗಿದ್ದು, ಗುರುವಾರ ಮಧ್ಯಾಹ್ನ ವೇಳೆ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು.

ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅಲ್ಲಿ ಅವರು ಮೃತಪಟ್ಟಿದ್ದರು. ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.

- Advertisement -

Related news

error: Content is protected !!