Saturday, June 28, 2025
spot_imgspot_img
spot_imgspot_img

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಾಲ್ಕನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ಶ್ರೀ ಸತ್ಯನಾರಾಯಣ ಪೂಜೆ

- Advertisement -
- Advertisement -

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ನಾಲ್ಕನೇ ದಿನದ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ನಡೆಯಿತು.

ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ 48ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ ಜು.16ರಂದು ಪ್ರಾರಂಭಗೊಂಡಿದ್ದು, ಆ.25 ತನಕ ನಡೆಯಲಿದೆ. ಮೂರನೇ ದಿನವಾದ ಇಂದು ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

- Advertisement -

Related news

error: Content is protected !!