Saturday, June 28, 2025
spot_imgspot_img
spot_imgspot_img

ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವ ಪತ್ತೆ

- Advertisement -
- Advertisement -

ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂಬಾಗದಲ್ಲಿರುವ ಇರುವ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.

ಮೃತ ಮಹಿಳೆ ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.
ಪಡು ಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂಬಾಗದಲ್ಲಿರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರ್ತಾ ಇರುತ್ತಾರೆ. ಇದೀಗ ಊರಿಗೆ ಬಂದಿದ್ದು, ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಡ್ರೈನೇಜ್ ಫಿಟ್ ನಲ್ಲಿ ಮಹಿಳೆ ಶವ ಮಡಚಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!