Monday, June 8, 2026
spot_imgspot_img
spot_imgspot_img

ವಿಟ್ಲ: ಕಾರು-ಟಿಪ್ಪರ್‌ ನಡುವೆ ಭೀಕರ ಅಪಘಾತ; ನಾಲ್ವರು ಗಂಭೀರ

- Advertisement -
- Advertisement -

ವಿಟ್ಲ: ಮಾಣಿ- ಮೈಸೂರು ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟುಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಮುಂಬೈ ಮೂಲದ ಪ್ರಯಾಣಿಕರು, ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.

- Advertisement -

Related news

error: Content is protected !!