


ಉಡುಪಿ : ಬಿಸ್ಕೆಟ್ ಕೊಡಿಸುವ ನೆಪದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ ಆರೋಪಿಯಾಗಿದ್ದಾನೆ.
ಬಿಸ್ಕೆಟ್ ಕೊಡಿಸುವುದಾಗಿ ಬಾಲಕಿಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಡುಬಿದ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾರ್ಮಿಕನಾಗಿದ್ದ ಈತ, ಒಟ್ಟಿಗೆ ದುಡಿಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಮಗಳನ್ನು ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿಯು ಹೊಟ್ಟೆನೋವು ಎಂದು ತಿಳಿಸಿದ್ದು, ಆಕೆಯನ್ನು ಪಡುಬಿದ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಬಳಿಕ ಬಾಲಕಿಯನ್ನು ಪಡುಬಿದ್ರೆ ಠಾಣಾ ಮಹಿಳಾ ಸಿಬಂದಿ, ಆಕೆಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾನೂನಿನನ್ವಯ ಪ್ರಕರಣ ದಾಖಲಿಸಲಾಗಿದೆ.
Insta: glacharyajewellers
Fb: glacharya