Wednesday, July 22, 2026
spot_imgspot_img
spot_imgspot_img

ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ಗಾಂಜಾ ಹೊಂದಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ಫರಂಗಿಪೇಟೆಯಲ್ಲಿ ಗಾಂಜಾ ಹೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 4 ಸಾವಿರ ರೂ.ಮೌಲ್ಯದ 235 ಗ್ರಾಂ. ಗಾಂಜಾ ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅಜರುದ್ದೀನ್ ಎಂದು ಗುರುತಿಸಲಾಗಿದೆ .

ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಮತ್ತು ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪಿಎಸ್ಐ ಪ್ರಸನ್ನ, ಪ್ರೊಬೆಷನರಿ ಪಿಎಸ್ಐ ನಸ್ರಿನ್ ತಾಜ್, ಎಚ್.ಸಿ ಸುರೇಶ್, ರಾಧಾಕೃಷ್ಣ ,ಪಿಸಿಗಳಾದ ನಜೀರ್,ಪುನಿತ್,ಮನೊಜ್,ವಿಶಾಲಾಕ್ಷಿ ತಂಡ ಕಾರ್ಯಾಚರಣೆ ನಡೆಸಿದರು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!