Sunday, June 14, 2026
spot_imgspot_img
spot_imgspot_img

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನ ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರು

- Advertisement -
- Advertisement -

ನವದೆಹಲಿ: ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಉತ್ತರ ಪ್ರದೇಶ ಹತ್ರಾಸ್​ಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಹೊರಟಿದ್ದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಪೊಲೀಸರು ಇವರ ವಾಹನವನ್ನ ತಡೆದಿದ್ದಾರೆ. ಅದಕ್ಕೆ ಗರಂ ಆದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಪಾದಯಾತ್ರೆ ಮೂಲಕ ಹತ್ರಾಸ್​​ಗೆ ಹೊರಟಿದ್ದರು.


ಈ ಸಂದರ್ಭದಲ್ಲಿ ಮತ್ತೆ ಉತ್ತರ ಪ್ರದೇಶದ ಪೊಲೀಸರು ರಾಹುಲ್ ಗಾಂಧಿಯನ್ನ ತಡೆದು ನಿಲ್ಲಿಸಿದ್ದಾರೆ. ಆಗ ಪೊಲೀಸರು ಮತ್ತು ರಾಹುಲ್ ಗಾಂಧಿ ಮಧ್ಯೆ ವಾಗ್ವಾದ ನಡೆದಿದೆ. ಕಾರ್ಯಕರ್ತರೂ ಇದ್ದುದರಿಂದ ನೂಕುನುಗ್ಗಲು ಸಂಭವಿಸಿ ತಳ್ಳಾಟ ಕೂಡ ನಡೆದಿದೆ. ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಪೊಲೀಸರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಹತ್ರಾಸ್​ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

- Advertisement -

Related news

error: Content is protected !!