Sunday, June 7, 2026
spot_imgspot_img
spot_imgspot_img

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್‌ ಸಮಾವೇಶ- ಜಾಥಾ ಹಾಗೂ ಹಕ್ಕೊತ್ತಾಯ ಮಂಡನೆ

- Advertisement -
- Advertisement -

ಬೆಳ್ತಂಗಡಿ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಜಾಥಾ ನಡೆದು ಬಳಿಕ ಬೃಹತ್‌ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡನೆ ನಡೆಯಿತು.

ಶ್ರೀ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಡಾ| ಎಲ್.ಹೆಚ್ ಮಂಜುನಾಥ್ ಪ್ರಸ್ತಾವನೆ ನೆರವೇರಿಸಿದರು, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್‌ ಹಾಗೂ ಲಯನ್ಸ್ ಅಧ್ಯಕ್ಷ ಜಯರಾಜ್ ಹೊಸಕೋಟೆ ಅಭಿಪ್ರಾಯ ಮಂಡನೆ ಮಾಡಿದರು.

ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ, ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಮಾಜಿ ಸಚಿವ ವಿನಯಕುಮಾರ್‌‌ ಸೊರಕೆ, ಉಜಿರೆ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ ಕೃಷ್ಣ ಪಡ್ಡೆಟ್ನಾಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಂದರ ಗೌಡ ಇಚ್ಚಿಲ, ಕಾಸಿಂ ಮಲ್ಲಿಗೆ ಮನೆ ಉಪಸ್ಥಿತರಿದ್ದರು.ಧರ್ಮಸ್ಥಳ ಸುಬ್ರಹ್ಮಣ್ಯ ಪ್ರಸಾದ್ ರವರಿಂದ ಹಕ್ಕೊತ್ತಾಯ ಮಂಡನೆ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಘ ಸಂಸ್ಥೆಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!