Sunday, June 29, 2025
spot_imgspot_img
spot_imgspot_img

ವಾರದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಯೋಧ ಪತ್ತೆ

- Advertisement -
- Advertisement -
vtv vitla

ರಜೆಯ ಮೇಲೆ ಮನೆಗೆ ತೆರಳಿದಾಗ ನಾಪತ್ತೆ ಆಗಿದ್ದ ಸೇನೆಯ ಭಾರತೀಯ ಯೋಧನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಯೋಧ ಜಾವೇದ್‌ ಅಹ್ಮದ್‌ ವಾನಿಯನ್ನು ಕುಲ್ಗಾಂ ಪೊಲೀಸರು ರಕ್ಷಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಮುಂದಿನ ವಿಚಾರಣೆ ನಡೆಸಲಾಗುತ್ತದೆ’ ಎಂದು ಜಮ್ಮು-ಕಾಶ್ಮೀರ ಪೊಲೀಸರು ಹೇಳಿದ್ದಾರೆ. ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ.

ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ ಆತಂಕವಿತ್ತು. ಆದರೆ ಯಾವುದೇ ಉಗ್ರಗಾಮಿ ಸಂಘಟನೆಗಳು ಅವರ ಅಪಹರಣದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ.

ಲಡಾಖ್‌ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಜು.29ರ ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದರು. ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯಾಗಿತ್ತು ಇದರಿಂದ ಇನ್ನೂ ಆತಂಕ ಹೆಚ್ಚಾಗಿತ್ತು. ಹುಡುಕಾಟ ನಡೆಸುವಂತೆ ಆತನ ಕುಟುಂಬ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.

- Advertisement -

Related news

error: Content is protected !!