Friday, June 5, 2026
spot_imgspot_img
spot_imgspot_img

ಪುತ್ತೂರು: ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ಮಹಿಳೆ ಮೃತ್ಯು..!!

- Advertisement -
- Advertisement -

ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.

ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಸುಚಿತ್ರರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ- ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!