Saturday, June 28, 2025
spot_imgspot_img
spot_imgspot_img

ಬಿಬಿಎಂಪಿ ಕಚೇರಿಯ ಆವರಣದಲ್ಲಿ ಬೆಂಕಿ ಅವಘಡ; 9 ಮಂದಿಗೆ ಗಂಭೀರ ಗಾಯ

- Advertisement -
- Advertisement -

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದೆ. 9ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ.

ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

- Advertisement -

Related news

error: Content is protected !!