Sunday, June 29, 2025
spot_imgspot_img
spot_imgspot_img

ಮಂಗಳೂರು: ಬಾಲಕಿಯ ಅಪಹರಣ ಪ್ರಕರಣ; ಆರೋಪಿ ಅರೆಸ್ಟ್..!

- Advertisement -
- Advertisement -

ಮಂಗಳೂರು: ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ಹೊರ ವಲಯದ ಕಸ್ಬಾ ಬೆಂಗ್ರೆಯ ಮೊಹಮ್ಮದ್‌ ಸರ್ಫ್ರಾಝ್‌ (22) ಬಂಧಿತ ಆರೋಪಿ. ಆತನ ವಿರುದ್ಧ ಅತ್ಯಾಚಾರ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆ. 10 ರಂದು ಅಪಹರಿಸಲಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನ್ನ ಪುತ್ರಿಯನ್ನು ಆರೋಪಿ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ತಂದೆ ದೂರು ನೀಡಿದ್ದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಅಪಹರಿಸಿದ ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ ಎಂದು ಪೊಲೀಸ್‌ ಪ್ರಕಟನೆ ತಿಳಿಸಿದೆ. ಆರೋಪಿ ಮೊಹಮ್ಮದ್‌ ಸರ್ಫ್ರಾಝ್‌ ಹಳೆ ಆರೋಪಿಯಾಗಿದ್ದು, ಕಂಕನಾಡಿ ನಗರ ಮತ್ತು ಬೈಂದೂರು ಪೊಲೀಸ್‌ ಠಾಣೆಗಳಲ್ಲಿ ಆತನ ವಿರುದ್ಧ ಮನೆ ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!