- Advertisement -
- Advertisement -
ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಸೇರಿದಂತೆ ಆರು ವರ್ಷದ ಮಗು ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ಸಾವನ್ನಪ್ಪಿದ್ದಾರೆ.
ಅಮೆರಿಕದಲ್ಲಿ ದಾವಣಗೆರೆ ದ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ ಘಟನೆ ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾದ ಇವರು ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದು, ಯೋಗೇಶ್, ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಈ ಮೂವರ ಸಾವು ನಿಗೂಢವಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
- Advertisement -