Sunday, June 14, 2026
spot_imgspot_img
spot_imgspot_img

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಶಾಲಾ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು..!!

- Advertisement -
- Advertisement -
vtv vitla

ಸರ್ಕಾರಿ ಶಾಲಾ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ರಹಸ್ಯವಾಗಿ ಮದುವೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಡಿ ಗ್ರಾಮವೊಂದರಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಶಿಕ್ಷಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಿಕ್ಷಕ ತಾನು ಪಾಠ ಮಾಡುತ್ತಿದ್ದ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದಾನೆ. ಈ ಶಿಕ್ಷಕ ವಿದ್ಯಾರ್ಥಿನಿಯ ಮನೆಯಲ್ಲೇ ಬಾಡಿಗೆ ಉಳಿದುಕೊಂಡಿದನೆಂದು ತಿಳಿದು ಬಂದಿದೆ. ಈತ ಮೂಲತಃ ಬೆಳಗಾವಿ ಜಿಲ್ಲೆಯವನು ಎಂದು ಹೇಳಲಾಗುತ್ತಿದ್ದು, ಶಿಕ್ಷಕನಿಗೆ ಈಗಾಗಲೇ ಮದುವೆಯಾಗಿ ಒಂದು ಮಗು ಕೂಡ ಇದೆ.

ಇದೀಗ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮದುವೆಯಾಗಿದ್ದಾನೆ. ಬೇಸಿಗೆ ರಜೆ ಸಂದರ್ಭದಲ್ಲಿ ಅಂದರೆ ಕಳೆದ ಮಾರ್ಚ್ ತಿಂಗಳಲ್ಲಿ ಯಾರಿಗೂ ಗೊತ್ತಾಗದಂತೆ ವಿದ್ಯಾರ್ಥಿನಿಗೆ ತಾಳಿ ಕಟ್ಟಿ, ಊರಲ್ಲೇ ಠಿಕಾಣಿ ಹೂಡಿದ್ದ. ಜೂನ್ ತಿಂಗಳ ಪ್ರಾರಂಭದಲ್ಲಿ ಶಿಕ್ಷಕನ ಮದುವೆ ಪುರಾಣ ಹೊರಬಿದ್ದಿದೆ. ಆರೋಪಿ ಶಿಕ್ಷಕ, ವಿದ್ಯಾರ್ಥಿನಿಯ ಮನೆಯಲ್ಲಿ ಬಾಡಿಗೆಗೆ ಉಳಿದುಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದೇ ವೇಳೆ ಅವನ ಕೋಣೆಯಲ್ಲೇ ತಾಳಿ ಕಟ್ಟಿ ಮದುವೆಯಾಗಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಮೇಹಕರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷನನ್ನು ಅಮಾನತು ಮಾಡುವ ಬದಲು ಸೇವೆಯಿಂದಲೇ ವಜಾ ಮಾಡಬೇಕೆಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!