Wednesday, August 26, 2026
spot_imgspot_img
spot_imgspot_img

ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ..!!

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ.

ಸಾಗರದ ಜೆ.ಪಿ.ನಗರ ನಿವಾಸಿಗಳಾದ ಶಾಬಾದ್ (26), ಅಜಯ್ (32) ಅತ್ಯಾಚಾರ ನಡೆಸಿದ ಕಿಡಿಗೇಡಿಗಳು. ಸಾಗರ ನಿವಾಸಿಯಾದ ಅಪ್ರಾಪ್ತ ಬಾಲಕಿಯನ್ನು ಆರೋಪಿಗಳು ಪ್ರವಾಸಕ್ಕೆಂದು ಜೋಗಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ್ದಾರೆ. ಮದ್ಯದ ಅಮಲಿನಲ್ಲೇ ಮನೆಗೆ ವಾಪಸ್ ಬಂದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾಳೆ.

ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ಬಾಲಕಿಯ ಪೋಷಕರು ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!