Saturday, June 6, 2026
spot_imgspot_img
spot_imgspot_img

ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತ್ಯು..!!

- Advertisement -
- Advertisement -

ರಜೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್‌ಟೇಬಲ್ ದೇವೇಂದ್ರಪ್ಪ (40) ಮೃತ ದುರ್ದೈವಿ. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ ಬಾಧಿಸುತ್ತಿದ್ದ ಕಾರಣ ಜೂನ್‌ನಿಂದ ರಜೆಯಲ್ಲಿದ್ದರು.

ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವ ಸಂದರ್ಭ ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದ ದೇವೇಂದ್ರಪ್ಪ ಕಳೆದ 16 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

- Advertisement -

Related news

error: Content is protected !!