Friday, June 27, 2025
spot_imgspot_img
spot_imgspot_img

ಸುಳ್ಯ: ಕಾರ್ಮಿಕರಿಗೆ ಢಿಕ್ಕಿ ಹೊಡೆದ ಕಾರು; ಓರ್ವ ಮೃತ್ಯು, ಮೂವರು ಗಂಭೀರ

- Advertisement -
- Advertisement -

ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಅದರಲ್ಲಿ ನಾಲ್ಕು ಮಂದಿ ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.

ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ರಭಸಕ್ಕೆ ಓರ್ವ ಮೃತ್ಯು, ಮೂವರು ಕಾರ್ಮಿಕರು ಗಂಭೀರ ಸ್ಥಿತಿಯಲ್ಲಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!