Thursday, June 4, 2026
spot_imgspot_img
spot_imgspot_img

ಆಸ್ತಿಗಾಗಿ 5 ತಿಂಗಳ ಹಸುಗೂಸನ್ನೇ ಕೊಂದ ಪಾಪಿ ಮಲತಾಯಿ

- Advertisement -
- Advertisement -

ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸನ್ನೇ ಕೊಲೆಗೈದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.

ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ ಎರಡು ಮದುವೆಯಾಗಿದ್ದು, 11 ವರ್ಷಗಳ ಹಿಂದೆ ಸಿದ್ದಪ್ಪ ಮೊದಲು ಶ್ರೀದೇವಿಯನ್ನು ಮದುವೆಯಾಗಿದ್ದ ಆದರೆ ಮಕ್ಕಳಾಗದ ಕಾರಣ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದನು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿದ್ದು, ಇತ್ತ ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿಯ ಐದು ತಿಂಗಳ ಮಗು ಸಂಗೀತಾಗೆ ಪಾಲು ಹೋಗುತ್ತೆ ಎನ್ನುವ ಅನುಮಾನದಿಂದ ಮೃತ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಿದ್ದಾಗ ಅಲ್ಲಿಗೆ ಬಂದ ದೇವಮ್ಮ, ತಾನು ಹಾಲುಣಿಸುತ್ತೇನೆ ಅಂತಾ ರೂಮಿಗೆ ಕರೆದೊಯ್ದು ಡೋರ್ ಹಾಕಿ ಹಾಲಿನ ಬಾಟ್ಲಿಯಲ್ಲಿ ವಿಷ ಬೆರೆಸಿ ಕೂಸಿಗೆ ಕುಡಿಸಿದ್ದಾಳೆ.
ವಿಷಬೆರೆತ ಹಾಲು ಕುಡಿದ ಸಂಗೀತಾ 3 ಗಂಟೆ ನಂತರ ಬಾಯಲ್ಲಿ ನೊರೆ ಬಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, .ಪೊಲೀಸರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ

- Advertisement -

Related news

error: Content is protected !!