Monday, June 15, 2026
spot_imgspot_img
spot_imgspot_img

ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿ ಆತ್ಮಹತ್ಯೆ..!!

- Advertisement -
- Advertisement -

ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಮನೆಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಾಗಿಲು ಪೇರಂಪಲ್ಲಿಯ ಕಕ್ಕಿಂಜೆ ದೇವಿನಗರ ಎಂಬಲ್ಲಿ ನಡೆದಿದೆ.

ಮೃತರನ್ನು ದೇವಿನಗರದ ಸುಕೇಶ್ ಶೆಟ್ಟಿ(51) ವರ್ಷ ಎಂದು ಗುರುತಿಸಲಾಗಿದೆ.

ಮುಂಬೈಯಲ್ಲಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು, ರಾತ್ರಿ ಹೊತ್ತಿನಲ್ಲಿ ಮುಂಬೈಯಿಂದ ಆಗಮಿಸಿ ಮನೆಯ ಹೊರಗಡೆ ಇರುವ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!