Friday, August 28, 2026
spot_imgspot_img
spot_imgspot_img

ಮಂಗಳೂರು: ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ; ಮದುವೆ ಸಂಭ್ರಮದಲ್ಲಿದ್ದ ಯುವತಿ ಮೃತ್ಯು, ಹಲವರಿಗೆ ಗಾಯ

- Advertisement -
- Advertisement -

ಮಂಗಳೂರು: ಆಟೋ ರಿಕ್ಷಾವೊಂದು ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರ ಬಳಿ ನಡೆದಿದೆ.

ಅರ್ಕುಳ ತುಪ್ಪೆಕಲ್ಲಿನ ಕುಟುಂಬವೊಂದು ಆಟೋ ರಿಕ್ಷಾ ಮೂಲಕ ದೇವಸ್ಥಾನಕ್ಕೆ ತೆರಳಿ ಹಿಂದಿರುತ್ತಿದ್ದ ವೇಳೆ ಬಂಗ್ಲೆಗುಡ್ಡೆಯಿಂದ ಈ ಅಪಘಾತ ಸಂಭವಿಸಿದೆ. ಮೃತ ಯುವತಿಯನ್ನು ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ(25) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಕೆಯ ತಾಯಿ ಮೀನಾಕ್ಷಿ(55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಬಾಲಕ ಭವಿಷ್ (09) ಹಾಗೂ ಚಾಲಕ ಪದ್ಮನಾಭ ಎಂದು ಗುರುತಿಸಲಾಗಿದೆ.

ಮೃತ ಯುವತಿ ಪ್ರೀತಿಗೆ ಕಳೆದ ಕೆಲ ತಿಂಗಳುಗಳ ಹಿಂದೆ ಮದುವೆ ನಿಶ್ಚಿತವಾಗಿದ್ದು, ಮುಂದಿನ ವರ್ಷ ಜನವರಿಯಲ್ಲಿ ಮದುವೆ ಕಾರ್ಯ ನಡೆಯುವುದರಲ್ಲಿತ್ತು. ಈ ಹಿನ್ನಲೆ ಮನೆ ಮಂದಿ ಸಿದ್ಧತೆಯನ್ನು ಕೂಡ ಮಾಡಿಕೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!