Saturday, June 28, 2025
spot_imgspot_img
spot_imgspot_img

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟ- ಮೂವರು ಮೃತ್ಯು

- Advertisement -
- Advertisement -

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.

ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ‌ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್, ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!