Tuesday, June 9, 2026
spot_imgspot_img
spot_imgspot_img

ಉದ್ಯಮಿಗೆ ವಂಚನೆ ಪ್ರಕರಣ; ಚೈತ್ರಾ ಸೇರಿದಂತೆ 7 ಆರೋಪಿಗಳಿಗೆ ಅ.6 ರವರೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಸೇರಿದಂತೆ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಚೈತ್ರಾ ಮತ್ತು ಗ್ಯಾಂಗ್‌ ಅನ್ನು ಸಿಸಿಬಿ ಅಧಿಕಾರಿಗಳು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು.

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಚೈತ್ರಾ ಸೇರಿದಂತೆ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನನಾಯ್ಕ್, ಧನರಾಜ್, ಶ್ರೀಕಾಂತ್ ಆರೋಪಿಗಳನ್ನು ಅ.6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಆರೋಪಿಗಳಾದ ರಮೇಶ್, ಚನ್ನನಾಯ್ಕ್‌ ಮತ್ತು ಧನರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಸೆ.26ಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಕೋರ್ಟ್‌ ಸೂಚನೆ ನೀಡಿದೆ. ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಿದೆ.

- Advertisement -

Related news

error: Content is protected !!