- Advertisement -
- Advertisement -
ಬಂಟ್ವಾಳ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿಯವರ ಮಾರ್ಗದರ್ಶನದಲ್ಲಿ, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ, ಕೊಳ್ನಾಡು ಮಹಾಶಕ್ತಿಕೇಂದ್ರದ ಕನ್ಯಾನ ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಕನ್ಯಾನ ಶ್ರೀ ಗುರುದೇವಾ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಪಂಚಾಯತ್ ಚುನಾವಣಾ ಪ್ರಭಾರಿಗಳಾದ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಮಂಡಲ ಪ್ರ.ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೊಂಬಯ್ಯ ಅರಳ, ಸಹಪ್ರಭಾರಿ ಪ್ರಭಾಕರ ಪ್ರಭು, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಅನೆಯಾಲ, ಪ್ರ.ಕಾರ್ಯದರ್ಶಿ ಲೋಹಿತ್ ಅಗರಿ ಮತ್ತು ಪಕ್ಷದ ಪ್ರಮುಖ ಕಾರ್ಯಕರ್ತರು ಹಾಗೂ ಕನ್ಯಾನ ಗ್ರಾಮದ ಹಿರಿಯ ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.


- Advertisement -








