Saturday, June 28, 2025
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ; ನಾಲ್ವರು ಮೃತ್ಯು

- Advertisement -
- Advertisement -

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು–ಮಂಗಳೂರು ಹೆದ್ದಾರಿಯ ನಾಗಮಂಗಲ ಸಮೀಪ ನಡೆದಿದೆ.

ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಸ್ವಿಫ್ಟ್‌ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸಾವನ್ನಪ್ಪಿರುವವರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮೃತರ ಗುರುತು ಪತ್ತೆಗಾಗಿ ಪ್ರಯತ್ನಿಸುತ್ತಿದ್ದಾರೆ.

- Advertisement -

Related news

error: Content is protected !!