Saturday, July 5, 2025
spot_imgspot_img
spot_imgspot_img

12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಅರೆಬೆತ್ತಲೆಯಾಗಿ ಸಹಾಯಕ್ಕಾಗಿ ಅಂಗಲಾಚಿದರೂ ನೋಡುತ್ತಾ ನಿಂತ ಜನ..!!

- Advertisement -
- Advertisement -

12 ವರ್ಷದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಸಹಾಯ ಮಾಡದೇ ಮಾನವೀಯತೆ ಮರೆತು ನೋಡುತ್ತಿದ್ದರೂ ವಿನಃ ಯಾರೂ ಸಹಾಯ ಮಾಡುವ ಗೋಜಿಗೂ ಹೋಗಲಿಲ್ಲ.

ಮಧ್ಯಪ್ರದೇಶದ ಉಜ್ಜಯಿನಿಯಿಂದ ಸುಮಾರು 15 ಕಿಮೀ ದೂರದಲ್ಲಿರುವ ಬದ್‌ನಗರ ರಸ್ತೆಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಇದರ ಪೂರ್ತಿ ವಿಡಿಯೋ ಸೆರೆಯಾಗಿದೆ.

ಬಾಲಕಿ ಸಣ್ಣ ಬೆಡ್‌ ಶೀಟ್‌ನಲ್ಲಿ ತನ್ನ ದೇಹವನ್ನು ಅರ್ಧಂಬರ್ಧವಾಗಿ ಮುಚ್ಚಿಕೊಂಡು ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೊಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬೀದಿಯಲ್ಲಿ ಅಲೆದಾಡುತ್ಥಾ ಕೊನೆಗೆ ಆಶ್ರಮವನ್ನು ತಲುಪಿದ್ದಾಳೆ. ಅಲ್ಲಿನ ಅರ್ಚಕರೊಬ್ಬರು ಈಕೆಯ ಮೇಲೆ ಅತ್ಯಾಚಾರ ಆಗಿರುವ ಶಂಕೆ ವ್ಯಕ್ತಪಡಿಸಿ ಟವೆಲ್‌ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರವಾಗಿರುವ ಖಚಿತವಾಗಿದೆ. ಆಕೆಗೆ ಆಗಿರುವ ಗಾಯಗಳು ಗಂಭೀರವಾಗಿದ್ದ ಕಾರಣ, ಬಾಲಕಿಯನ್ನು ಇಂದೋರ್‌ನ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹುಡುಗಿಯ ಹೆಸರು ಮತ್ತು ವಿಳಾಸವನ್ನು ಕೇಳಿದಾಗ, ಅವಳಿಗೆ ಸರಿಯಾಗಿ ಉತ್ತರಿಸಲು ಸಾಧ್ಯವಾಗಿಲ್ಲ. ಪೊಲೀಸರು ಘಟನೆಗೆ ಸಂಬಂಧಪಟ್ಟಂತೆ ಅನಾಮಿಕ ವ್ಯಕ್ತಿಯ ವಿರುದ್ಧ ರೇಪ್‌ ಕೇಸ್‌ ದಾಖಲು ಮಾಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಉಜ್ಜಯಿನಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!