Wednesday, July 22, 2026
spot_imgspot_img
spot_imgspot_img

ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ

- Advertisement -
- Advertisement -

ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ನವದೆಹಲಿಯ ಆಜಾದ್‌ಪುರದಲ್ಲಿ ನಡೆದಿದೆ.

ಮೂಲಗಳ ಪ್ರಕಾರ ಮಾರುಕಟ್ಟೆಯ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಮಳಿಗೆಗಳು ಹೊತ್ತಿ ಉರಿಯುತ್ತಿವೆ. ಸದ್ಯ 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಆದ್ರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜೊತೆಗೆ ಸಾವು-ನೋವು ಉಂಟಾಗಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿದ್ದಾರೆ.

- Advertisement -

Related news

error: Content is protected !!