Monday, August 10, 2026
spot_imgspot_img
spot_imgspot_img

ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಇನಾಮ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ರಾಹುಲ್ ಕೋಲಕಾರ (15) ಎಂದು ತಿಳಿದು ಬಂದಿದೆ. ಹುಲ್ಯಾಳ ಗ್ರಾಮದ ರಾಹುಲ್ ಇಲ್ಲಿನ ಶ್ರೀಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಅರ್ಧವಾರ್ಷಿಕ ಪರೀಕ್ಷೆಗೆ ತೆರಳಿದ್ದನು.

ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆತ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!