Saturday, June 28, 2025
spot_imgspot_img
spot_imgspot_img

ಗ್ಯೂಗಲ್‌ ಮ್ಯಾಪ್‌ ನೋಡುತ್ತಾ, ಎಡ ತಿರುವು ಬಿಟ್ಟು ನೇರವಾಗಿ ಹೋದ ಕಾರು ನಿಯಂತ್ರಣ ತಪ್ಪಿ ನದಿಗೆ; ಇಬ್ಬರು ವೈದ್ಯರು ಮೃತ್ಯು..!!

- Advertisement -
- Advertisement -

ಕಾರೊಂದು ನದಿಗೆ ಬಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೈದ್ಯರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಮೃತರನ್ನು ಖಾಸಗಿ ಆಸ್ಪತ್ರೆಯ ವೈದ್ಯರಾದ ಅದ್ವೈತ್ (29) ಮತ್ತು ಅಜ್ಮಲ್ (29) ಎನ್ನಲಾಗಿದೆ. ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಗೋತುರುತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ದಾರಿ ಕಾಣುತ್ತಿರಲಿಲ್ಲ ಎನ್ನಲಾಗಿದೆ. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗಿ,ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದು, ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ.

ಅಪಘಾತವನ್ನು ಕಂಡ ಸ್ಥಳೀಯರು ತಕ್ಷಣ ಸ್ಥಳದಲ್ಲಿ ಜಮಾಯಿಸಿದರು. ಅಲ್ಲಿದ್ದ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಾರಿನಲ್ಲಿ ಅದ್ವೈತ್ ಜೊತೆಗೆ ನಾಲ್ವರು ಇದ್ದರು. ಐವರೂ ಕೊಚ್ಚಿಯಿಂದ ಕೊಡಂಗಲ್ಲೂರಿಗೆ ಹಿಂತಿರುಗುತ್ತಿದ್ದರು. ಅದ್ವೈತ್ ಹುಟ್ಟುಹಬ್ಬದ ನಿಮಿತ್ತ ಈ ಮಂದಿ ಶಾಪಿಂಗ್‌ಗೆ ತೆರಳಿದ್ದರು ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಅಪಘಾತದಿಂದ ಬದುಕುಳಿದಿರುವ ಡಾ.ಗಾಜಿಕ್ ತಬ್ಸಿರ್, ಜಿಪಿಎಸ್ ನೆರವಿನಿಂದ ಮುಂದೆ ಹೋಗುತ್ತಿದ್ದೆವು ಎಂದು ತಿಳಿಸಿದ್ದಾರೆ. ನಾನು ಕಾರನ್ನು ಓಡಿಸುತ್ತಿರಲಿಲ್ಲ. ಗೂಗಲ್ ಮ್ಯಾಪ್ ನೀಡಿದ ತಪ್ಪು ನಿರ್ದೇಶನದಿಂದ ಅಥವಾ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆಯೇ ಎಂಬ ಬಗ್ಗೆ ನಾವು ಯಾವುದೇ ನಿಖರವಾದ ಉತ್ತರವನ್ನು ನೀಡಲು ಸಾಧ್ಯವಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಪೊಲೀಸರು ಅಪಘಾತದ ತನಿಖೆಯಲ್ಲಿ ನಿರತರಾಗಿದ್ದಾರೆ. ಇಬ್ಬರ ಮೃತದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

Related news

error: Content is protected !!