Wednesday, August 26, 2026
spot_imgspot_img
spot_imgspot_img

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ; ತಾಯಿ, ಮಗು ಮೃತ್ಯು

- Advertisement -
- Advertisement -

ನಗರದ ಹೊರವಲಯದ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ವೇಳೆ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!