Saturday, June 28, 2025
spot_imgspot_img
spot_imgspot_img

ಅಮೇರಿಕಾದಲ್ಲಿ ಭಾರತೀಯ ಮೂಲದ ದಂಪತಿ ಹಾಗೂ ಮಕ್ಕಳು ಶವವಾಗಿ ಪತ್ತೆ..!

- Advertisement -
- Advertisement -

ಭಾರತೀಯ ಮೂಲದ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ತಮ್ಮ ಮನೆಯಲ್ಲೇ ಶವವಾಗಿ ಪತ್ತೆಯಾದ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶ ಮೂಲದ ತೇಜ್ ಪ್ರತಾಪ್ ಸಿಂಗ್ (43), ಸೋನಾಲ್ ಪರಿಹಾರ್ (42) ಹಾಗೂ ಅವರ 10 ವರ್ಷದ ಮಗ ಮತ್ತು 6 ವರ್ಷದ ಮಗಳು ಎಂದು ಗುರುತಿಸಲಾಗಿದೆ. ಸಂಬಂಧಿಯೊಬ್ಬರು ಯೋಗಕ್ಷೇಮ ವಿಚಾರಣೆಗೆಂದು ಮನೆಗೆ ಬಂದಾಗ ಮೃತದೇಹಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಿಯು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ಲೇನ್ಸ್‌ಬೊರೊ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಾಲ್ವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ ಈವರೆಗೂ ಕೊಲೆಯೋ? ಆತ್ಮಹತ್ಯೆಯೋ ಎಂದು ತಿಳಿದುಬಂದಿಲ್ಲ.

- Advertisement -

Related news

error: Content is protected !!