Friday, June 19, 2026
spot_imgspot_img
spot_imgspot_img

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ಸಾವು

- Advertisement -
- Advertisement -

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಆವರಣದ ಒಳಗಡೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಬೆಂಗಳೂರಿನಲ್ಲಿ ನಡೆದಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್​ ಒಳಗೆ ಕಾರೊಂದು ವೇಗವಾಗಿ ಬಂದು ವಿದ್ಯಾರ್ಥಿನಿಯರಿಗೆ ಭೀಕರವಾಗಿ ಗುದ್ದಿದ್ದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿಯರು ಇದ್ದ ವೇಳೆ ಅತಿ ವೇಗವಾಗಿ ಬಂದು ಕಾರು ಇಬ್ಬರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದು ಬಳಿಕ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಓರ್ವ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟರೇ, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುದ್ದಿದ್ದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ.

- Advertisement -

Related news

error: Content is protected !!