Tuesday, June 23, 2026
spot_imgspot_img
spot_imgspot_img

ಮನೆಗೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಮನೆ ಮಾಲೀಕ ಅತ್ಯಾಚಾರಕ್ಕೆ ಯತ್ನ

- Advertisement -
- Advertisement -

ತೆಲಂಗಾಣ: ತೆಲಂಗಾಣದಲ್ಲಿ ಮನೆಗೆಲಸ ಮಾಡುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಮನೆ ಮಾಲೀಕ ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದಾಗ ಬೆಂಕಿ ಹಚ್ಚಿರುವ ದಾರುಣ ಘಟನೆ ನಡೆದಿದೆ.

 ತೆಲಂಗಾಣದ ಖಮ್ಮಂ ಜಿಲ್ಲೆಯ ಮನೆಯೊಂದರಲ್ಲಿ ಕೆಲಸಕ್ಕಿದ್ದ 13 ವರ್ಷದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಮನೆ ಮಾಲೀಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಆಕೆ ವಿರೋಧಿಸಿದ್ದರಿಂದ ಕೋಪಗೊಂಡು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸೆ. 18ರಂದೇ ಈ ಘಟನೆ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.

ಈ ಘಟನೆಯಲ್ಲಿ ಬಾಲಕಿಯ ಆಕೆಯ ದೇಹ ಶೇ. 70ರಷ್ಟು ಸುಟ್ಟುಹೋಗಿದೆ. ಬಾಲಕಿ ಈಗ ಚೇತರಿಸಿಕೊಳ್ಳುತ್ತಿದ್ದು, ಸೋಮವಾರ ಆಕೆ ಪೊಲೀಸರಿಗೆ ನೀಡಿದ ಹೇಳಿಕೆಯ ಆಧಾರದಲ್ಲಿ ಮನೆ ಮಾಲೀಕನನ್ನು ಬಂಧಿಸಲಾಗಿದೆ. ಮೂಲಗಳ ಪ್ರಕಾರ, ಆ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಮನೆ ಮಾಲೀಕ ಆಕೆಯ ತಂದೆಯನ್ನು ಕರೆದು, ಆಕಸ್ಮಿಕವಾಗಿ ಬೆಂಕಿ ಹೊತ್ತಿ ಈ ರೀತಿ ಆಯಿತು ಎಂದು ಹೇಳಿದ್ದ.

ಆದರೆ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾನು ರೂಂನಲ್ಲಿ ನೆಲ ಗುಡಿಸುತ್ತಿದ್ದಾಗ ಬಂದ ಮಾಲೀಕ ತನ್ನ ಜೊತೆ ಮಲಗಲು ಹೇಳಿದ್ದ. ಆ ವೇಳೆಗೆ ಆತ ಒಬ್ಬನೇ ಮನೆಯಲ್ಲಿದ್ದ. ಅದಕ್ಕೆ ನಾನು ಒಪ್ಪದಿದ್ದಾಗ ಬಟ್ಟೆ ಹರಿದು, ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ. ಆಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎಂದು ಘಟನೆಯನ್ನು ವಿವರಿಸಿದ್ದಾಳೆ.

- Advertisement -

Related news

error: Content is protected !!