Wednesday, August 26, 2026
spot_imgspot_img
spot_imgspot_img

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಮೃತ್ಯು

- Advertisement -
- Advertisement -

ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ರಾಜೇಶ್ (42), ಉಮಾ (35) ಸ್ಥಳದಲ್ಲೇ ಸಾವನಪ್ಪಿರುವ ದುರ್ದೈವಿಗಳು. ಬೆಂಗಳೂರಿನ ಪೀಣ್ಯ ಮೂಲದವರಾಗಿರೋ ರಾಜೇಶ್ ಕುಟುಂಬ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಓಮ್ನಿ ಕಾರೊಂದು ಲಾರಿಯನ್ನು ಹಿಂದಿಕ್ಕುವ ಬರದಲ್ಲಿ ಎದುರಿಗೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿರುವ ಓಮ್ನಿ ಕಾರು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!