Sunday, June 7, 2026
spot_imgspot_img
spot_imgspot_img

ಬಂಟ್ವಾಳ: ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ

- Advertisement -
- Advertisement -

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೆರೆಕೋಡಿ ನಿವಾಸಿ ತಂಗಮ್ಮ ಗಾಯಗೊಂಡ ಮಹಿಳೆ.
ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿರುವ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸಮಾಡುತ್ತಿದ್ದು, ಚಹಾ ಕುಡಿಯಲು ಹೋಟೆಲ್‌ಗೆ ಹೋಗಲು ರಸ್ತೆ ದಾಟುವ ವೇಳೆ ಅತೀ ವೇಗ ಮತ್ತು ನಿರ್ಲಕ್ಷ್ಯ ದಿಂದ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದಿದ್ದಾನೆ.

ಘಟನೆಯಿಂದ ಗಾಯಗೊಂಡ ಇವರನ್ನು ಮೂಡಬಿದಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!