Wednesday, August 5, 2026
spot_imgspot_img
spot_imgspot_img

ಬೆಂಗಳೂರು: ಮಂಗಳೂರು ಮೂಲದ ವಿಕೃತ ಪತಿ ಸ್ನೇಹಿತರೊಂದಿಗೆ ದೈಹಿಕ ಸಂಪರ್ಕಕ್ಕೆ ಪತ್ನಿಗೆ ಒತ್ತಾಯ

- Advertisement -
- Advertisement -

ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು ಮೂಲದ ವಿಕೃತ ಪತಿ ಆತನ ಮೂರು ಜನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದು, ಗಂಡನ ವಿಚಿತ್ರ ಬೇಡಿಕೆ ನಿರಾಕರಿಸಿದ್ದಕ್ಕೆ ಆತ ಪತ್ನಿಯ ಮೇಲೆ ಹಲ್ಲೆ ಸಹ ಮಾಡಿದ್ದಾನೆ. ಅಲ್ಲದೇ ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ.

ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!