Saturday, June 28, 2025
spot_imgspot_img
spot_imgspot_img

ಪುತ್ತೂರು: ಅಪ್ರಾಪ್ತ ಮೇಲೆ ಅತ್ಯಾಚಾರ; ಬೆಂಗಳೂರಿನಲ್ಲಿ ಆರೋಪಿಯ ಬಂಧನ

- Advertisement -
- Advertisement -
vtv vitla

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪದಡಿ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧನವಾದ ಆರೋಪಿ .

ಪುತ್ತೂರಿನ ಹೈಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕೆಲ ತಿಂಗಳುಗಳ ಹಿಂದೆ ಆರೋಪಿಯು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆ ಕಲಿಯುತ್ತಿದ್ದ ಶಾಲೆಯ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!