Sunday, June 29, 2025
spot_imgspot_img
spot_imgspot_img

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

- Advertisement -
- Advertisement -
This image has an empty alt attribute; its file name is balavikas-866x1024.jpg

ದಿನೇ ದಿನೆ ಬಿಎಂಟಿಸಿ ಬಸ್‌ಗೆ (BMTC) ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ ಬಿನ್ನಮಂಗಲ ಬಳಿ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಗುದ್ದಿದ್ದು, ಗುದ್ದಿದ ರಭಸಕ್ಕೆ ಬೈಕ್ ಸವಾರ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ಕಿಲ್ಲರ್ ಬಿಎಂಟಿಸಿ ಬಸ್‌ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿಯಾದ ಘಟನೆ ಯಶವಂತಪುರದ ಗೋವರ್ಧನ ಬಳಿ ನಡೆದಿತ್ತು. ಇದಕ್ಕೂ ಮೊದಲು ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಘಟನೆಯ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿತ್ತು. ಈ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿತ್ತು. ಚಾಲಕರ ವೇಗದ ಚಾಲನೆಯೇ ಈ ರೀತಿಯಾದ ಘಟನೆಗಳಿಗೆ ಮೂಲ ಕಾರಣ ಎಂದು ಜನರು ಆರೋಪಿಸುತ್ತಿದ್ದಾರೆ.

- Advertisement -

Related news

error: Content is protected !!