Sunday, June 29, 2025
spot_imgspot_img
spot_imgspot_img

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

- Advertisement -
- Advertisement -

ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಕಾರವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಡೆಂಗ್ಯೂಗೆ ಬಲಿಯಾದ ಯುವಕ.

ಈತ ಬೋಟ್‌ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತಿದ್ದ. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ.

ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿರುವ ಇನ್ನೂ ಇಬ್ಬರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

- Advertisement -

Related news

error: Content is protected !!