Friday, June 5, 2026
spot_imgspot_img
spot_imgspot_img

ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ರಿಕ್ಷಾ ಪ್ರಯಾಣಿಕ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರ ಪೈಕಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರುವಾಯಿ ಸಮೀಪದ ಬೆರಿಪದವು ಎಂಬಲ್ಲಿ ನಡೆದಿದೆ.

ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಿಕ್ಷಾದಲ್ಲಿದ್ದ ಬಾಯಾರು ಪೆರುವೋಡಿ ನಿವಾಸಿ ನಾಗೇಶ್ ಭಟ್ (47) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಉಳಿದವರು ಗಂಭೀರ ಗಾಯ ಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!