Monday, June 30, 2025
spot_imgspot_img
spot_imgspot_img

ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.

ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ನೆಲಮಂಗಲದಲ್ಲಿನ ಅರಿಶಿಣಕುಂಟೆಯ ಆದರ್ಶನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಕೆ ಖುಷಿಯಾಗಿಯೇ ಇದ್ದಳು, ಬರೀ ೨೫ ವರ್ಷ ಇಷ್ಟು ದೊಡ್ಡ ನಿರ್ಧಾರ ಕೈಗೊಂಡಿದ್ದು ಏಕೆ? ಎಂದು ಹೆತ್ತವರು ಕಣ್ಣೀರಿಟ್ಟಿದ್ದಾರೆ.

- Advertisement -

Related news

error: Content is protected !!