Sunday, June 29, 2025
spot_imgspot_img
spot_imgspot_img

ನಿವೃತ್ತ ಪೊಲೀಸ್ ಅಧಿಕಾರಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

- Advertisement -
- Advertisement -

ನಿವೃತ್ತ ಪೊಲೀಸ್ ಅಧಿಕಾರಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಬ್ಯೂಟಿ ಪಾರ್ಲರ್ ನೆಪದಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೋಲಿಸರು ದಾಳಿ ಮಾಡಿ, ಐವರು ಯುವತಿಯರನ್ನು ರಕ್ಷಣೆ ಮಾಡಿ, ಇಬ್ಬರು ವಿಟ ಪುರುಷರನ್ನು ಬಂಧಿಸಿದ್ದಾರೆ.

ಲಲಿತ ಮಹಲ್‌ ನಗರದಲ್ಲಿರುವ ನಿವೃತ್ತ ಇನ್ಸ್‌ಪೆಕ್ಟರ್ ಜಿ.ಬಿ.ರಂಗಸ್ವಾಮಿ ಅವರ ನಿವಾಸದಲ್ಲಿ ದುನಿಯಾ ಫ್ಯಾಮಿಲಿ ಸಲೂನ್‌ ನಡೆಸಲಾಗುತ್ತಿತ್ತು. ಆರೋಪಿಗಳು ಬ್ಯೂಟಿ ಪಾರ್ಲರ್ ನೆಪದಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಮಹೇಶ್, ಚೈತ್ರಾ ಈ ದಂಧೆಯ ಕಿಂಗ್‌ಪಿನ್‌ಗಳಾಗಿದ್ದು, ಇವರಿಬ್ಬರ ಮೇಲೆ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ.

ನಿವೃತ್ತ ಪೊಲೀಸ್ ಅಧಿಕಾರಿ, ತಾವು ವಾಸವಿರುವ ಮನೆಯಲ್ಲೇ ಮಾಂಸ ದಂಧೆಗೆ ಅವಕಾಶ ಮಾಡಿಕೊಟ್ಟರೇ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಪೊಲೀಸರು, ಒಡನಾಡಿ ಸೇವಾ ಸಂಸ್ಥೆ ಜಂಟಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!