Sunday, June 29, 2025
spot_imgspot_img
spot_imgspot_img

ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು..!

- Advertisement -
- Advertisement -

ವಿದ್ಯಾರ್ಥಿನಿಯೋರ್ವಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ವಸತಿ ಶಾಲೆಯೊಂದರಲ್ಲಿ ನಡೆದಿದೆ.

ಉಷಾ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಆಂಬುಲೆನ್ಸ್‌ ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ ಪ್ರಾಂಶುಪಾಲ ಶಿವರಾಜ್ ಶಿವರಾಜ್ ಸ್ಪಷ್ಟಪಡಿಸಿದ್ದು, ಹಲವು ಬಾರಿ ಆಕೆಯ ಪೊಷಕರಿಗೆ ತಿಳಿಸಿ ಮನೆಗೆ ಕಳುಹಿಸಿ ಅಲ್ಲಿಯೇ ವ್ಯಾಸಂಗ ಮಾಡುವಂತೆ ಹೇಳಿದರು. ಆದರೆ, ಪೋಷಕರು ಇದೊಂದು ವರ್ಷ ವ್ಯಾಸಂಗ ಮಾಡಲಿ, ಮುಂದಿನ ವರ್ಷ ಬದಲಾಯಿಸುವುದಾಗಿ ಹೇಳಿ ವಸತಿ ಶಾಲೆಯಲ್ಲಿ ಬಿಟ್ಟಿದ್ದರು.

ಆದರೆ, ಇತ್ತೀಚೆಗೆ ಉಷಾ ತುಂಬಾ ಡಿಪ್ರೆಷನ್‍ಗೆ ಒಳಗಾಗಿದ್ದಳು. ಪೋಷಕರು ಚಿಕಿತ್ಸೆ ಕೊಡಿಸಿದ್ದು, ಪ್ರತಿ ದಿನ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಳು. ಇಂದು ಏಕಾಏಕಿ ಕುಸಿದ್ದು ಬಿದ್ದಳು. ಪ್ರಥಮ ಚಿಕಿತ್ಸೆಗೆಂದು ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ದುರಾದೃಷ್ಟವಶಾತ್ ಆಸ್ಪತ್ರೆಗೆ ಬರುವಷ್ಟರಲ್ಲಿ ಬಾಲಕಿ ತೀರಿಕೊಂಡಿದ್ದಳು.

- Advertisement -

Related news

error: Content is protected !!