Sunday, August 2, 2026
spot_imgspot_img
spot_imgspot_img

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

- Advertisement -
- Advertisement -

ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ (43) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಯ ಮನೆಯ ಪರಿಚಿತನೇ ಆಗಿದ್ದು, ಆಗಾಗ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಬಾಲಕಿ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!