Saturday, August 8, 2026
spot_imgspot_img
spot_imgspot_img

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್

- Advertisement -
- Advertisement -

ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಮೇಲೆ ಸಿಕ್ಕಿಬಿದ್ದ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ.

ಈತ ಮಂಗಳೂರು ಏರ್‌ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆ‌ರ್ ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ. ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!