Saturday, June 28, 2025
spot_imgspot_img
spot_imgspot_img

ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತ್ನಿಗೆ ಬೆಲ್ಟ್‌ನಲ್ಲಿ ಥಳಿಸಿದ ಪತಿ!

- Advertisement -
- Advertisement -

ಪತ್ನಿಗೆ ಥಳಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಇಬ್ಬರು ಸಂಬಂಧಿಕರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಫ್ಯಾಶನ್ ಬಳೆಯನ್ನು ತೊಟ್ಟಿದ್ದಕ್ಕೆ ಪತಿ ಪ್ರದೀಪ್ ಅರ್ಕಾಡೆಯು ಪತ್ನಿಗೆ ಬೆಲ್ಟ್ ನಲ್ಲಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾನೆ. ನವೆಂಬರ್ 13 ರಂದು ಅತ್ತೆ ಮಹಿಳೆಯ ಕೂದಲನ್ನು ಎಳೆದು ಹಲವಾರು ಬಾರಿ ಕಪಾಳಮೋಕ್ಷ ಮಾಡಿದ್ದಾಳೆ. ಪತಿ ಕೂಡ ಬೆಲ್ಟ್ ನಿಂದ ಥಳಿಸಿದ್ದಾನೆ.

ಘಟನೆಯ ನಂತರ ಸಂತ್ರಸ್ತೆ ಪುಣೆಯಲ್ಲಿರುವ ತನ್ನ ಪೋಷಕರ ಮನೆಗೆ ಹೋಗಿ ಅಲ್ಲಿ ದೂರು ದಾಖಲಿಸಿದರು. ನಂತರ ಪ್ರಕರಣವನ್ನು ನವಿ ಮುಂಬೈಗೆ ತನಿಖೆಗಾಗಿ ವರ್ಗಾಯಿಸಲಾಯಿತು ಎಂದು ಪೊಲೀಸರು ಹೇಳಿದರು.

- Advertisement -

Related news

error: Content is protected !!