- Advertisement -
- Advertisement -
ವಿಟ್ಲ: ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ನಡೆದಿದೆ. ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪ ದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
- Advertisement -