Sunday, June 29, 2025
spot_imgspot_img
spot_imgspot_img

ಪತ್ನಿ ಜೊತೆ ಅನೈತಿಕ ಸಂಬಂಧ; ವ್ಯಕ್ತಿಯ ಬರ್ಬರ ಕೊಲೆ..!

- Advertisement -
- Advertisement -

ಅನೈತಿಕ ಸಂಬಂಧದ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಮಹದೇವಸ್ವಾಮಿ (39) ಹಾಗೂ ಸೋಮಯ್ಯ ಕೊಲೆ ಆರೋಪಿ ಎಂದು ಗುರುತಿಸಲಾಗಿದೆ.

ಸೋಮಯ್ಯ ಪತ್ನಿ ಜೊತೆ ಮಹದೇವಸ್ವಾಮಿ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪವಿದೆ. ಈ ವಿಚಾರಕ್ಕೆ ಆರೋಪಿ ಸೋಮಯ್ಯ, ರಾತ್ರಿ ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ .ಕೊಲೆ ಬಳಿಕ ಸೋಮಯ್ಯ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!