Monday, June 30, 2025
spot_imgspot_img
spot_imgspot_img

ಮೂರು ವರ್ಷದ ಮಗು ಮೇಲೆ ಹರಿದ ಕಾರು..!

- Advertisement -
- Advertisement -

ಅಪಾರ್ಟ್ಮೆಂಟ್‌ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್‌ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತಪಟ್ಟ ಮಗು ಜೋಗ್ ಜುತಾರ್, ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಎಂಧು ಗುರುತಿಸಲಾಗಿದೆ.

ಮೊದಲು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ದಿದ್ದರು. ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ನಂತರ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ಗೊತ್ತಾಗಿದೆ. ಸದ್ಯ ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!